×
Ad

ನವ ವಧು ಆತ್ಮಹತ್ಯೆ: ಕೊಲೆ ಆರೋಪ

Update: 2017-11-09 19:23 IST

ಬೆಂಗಳೂರು, ನ.9: ಒಂಭತ್ತು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವ ವಧುವೊಬ್ಬರು ನಿಗೂಢವಾಗಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ಇಲ್ಲಿನ ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಇಟ್ಟುಮಡುವಿನ ನಿವಾಸಿ ಹರ್ಷಿತಾ(25) ಎಂಬಾಕೆ ನಿಗೂಢವಾಗಿ ಮೃತಪಟ್ಟ ವಧು ಎಂದು ಪೊಲೀಸರು ಗುರುತಿಸಿದ್ದಾರೆ.

ಅ.30ರಂದು ಹರ್ಷಿತಾ ಅವರಿಗೆ ಸಾಫ್ಟ್‌ವೇರ್ ಕಂಪೆನಿಯ ಉದ್ಯೋಗಿ ಚೇತನ್ ಅವರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ನಿನ್ನೆಯಷ್ಟೇ ದಂಪತಿ ಪ್ರವಾಸಕ್ಕೆ ಹೋಗಿ ರಾತ್ರಿ ಮನೆಗೆ ಮರಳಿದ್ದರು. ಬೆಳಗ್ಗೆ ಚೇತನ್ ಹೊರ ಹೋಗಿದ್ದಾಗ ಹರ್ಷಿತಾ ಮನೆಯಲ್ಲೇ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ.

ಆದರೆ, ಹರ್ಷಿತಾ ಪೋಷಕರು, ಹರ್ಷಿತಾ ಅವರು ಆತ್ಮಹತ್ಯೆ ಮಾಡಿಕೊಂಡಿಲ್ಲ. ಅವರನ್ನು ವ್ಯವಸ್ಥಿತವಾಗಿ ಪತಿಯ ಮನೆಯ ಕಡೆಯವರು ಕೊಲೆ ಮಾಡಿದ್ದಾರೆ, ವರದಕ್ಷಿಣೆಗಾಗಿ ಪೀಡಿಸುತ್ತಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News