×
Ad

ಪೆಟ್ರೋಲ್ ಬಂಕ್‌ಗಳಲ್ಲಿ ಸಾರ್ವಜನಿಕ ಶೌಚಾಲಯಕ್ಕೆ ಸೂಚನೆ

Update: 2017-11-09 21:11 IST

ಉಡುಪಿ, ನ.9:ಸ್ವಚ್ಚ ಬಾರತ್ ಮಿಷನ್ ಯೋಜನೆಯಡಿಯಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯನ್ನು ಬಯಲು ಶೌಚಮುಕ್ತ ನಗರವಾಗಿಸುವ ದೃಷ್ಟಿಯಿಂದ ರಾ. ಹೆದ್ದಾರಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವಂತೆ ಹಾಗೂ ವಾಹನಕ್ಕೆ ಇಂಧನ ತುಂಬಿಸಲು ಬರುವ ಸಾರ್ವಜನಿಕರ ಉಪಯೋಗಕ್ಕೆ ನೀಡುವಂತೆ ನಿರ್ದೇಶನ ನೀಡಲಾಗಿದೆ.

ಈ ಬಗ್ಗೆ ಈಗಾಗಲೇ ಕೇಂದ್ರದ ನಗರಾಭಿವೃದ್ಧಿ ಸಚಿವಾಲಯ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ್ನು ಬಯಲು ಮಲ ವಿಸರ್ಜನೆ ಮುಕ್ತ ನಗರವೆಂದು ಈಗಾಗಲೇ ಸರಕಾರ ಘೋಷಿಸಿದೆ. ಈ ಸ್ಥಾನಮಾನವನ್ನು ಕಾಯ್ದುಕೊಳ್ಳಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಪಟ್ಟಣ ಪಂಚಾಯತ್ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News