×
Ad

ಮಹಿಳೆಯರ ಬಗ್ಗೆ ಅಶ್ಲೀಲ ಹೇಳಿಕೆ : ಗೋ ಮದುಸೂದನ್ ಬಂಧನಕ್ಕೆ ಎಸ್‍ಡಿಪಿಐ ಆಗ್ರಹ

Update: 2017-11-09 21:24 IST

ಪುತ್ತೂರು,ನ.9: ಸುದ್ದಿ ವಾಹಿನಿಯೊಂದರಲ್ಲಿ ನಡೆದ ಚರ್ಚಾಕೂಟದಲ್ಲಿ ಭಾಗವಹಿಸಿದ್ದ ಸಂಘ ಪರಿವಾರದ ಮುಖಂಡ ಗೋ ಮದುಸೂದನ್ ಅವರು ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಅವರನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್‍ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ದುಲ್ ಹಮೀದ್ ಮೆಜೆಸ್ಟಿಕ್ ಅವರು ಆಗ್ರಹಿಸಿದ್ದಾರೆ.

ಮಹಿಳೆಯರನ್ನು ದೇವತೆಗಳು ಎಂದು ಗೌರವಿಸುವ ಭಾರತದಲ್ಲಿ ಮಹಿಳೆಯರ ಬಗ್ಗೆ ಕೀಳಾಗಿ ಬಿಜೆಪಿ, ಆರ್‍ಎಸ್‍ಎಸ್ ಪ್ರಾಯೋಜಿತ ಬುದ್ದಿಯನ್ನು ಪ್ರಯೋಗಿಸಿರುವುದು ಜನರ ಭಾವನೆಗೆ ಧಕ್ಕೆ ಉಂಟು ಮಾಡುವ ಸಂಗತಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತವಿದ್ದರೂ ಪೊಲೀಸರು ಯಾವುದೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸದೆ ಸುಮ್ಮನಿರುವುದು ರಾಜ್ಯದ ಮಹಿಳೆಯರು ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಳ್ಳುವಂತಾಗಿದೆ. ಜಿಲ್ಲಾಡಳಿತ ಕೂಡಲೇ ಗೋ ಮದುಸೂದನ್ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಎಸ್‍ಡಿಪಿಐ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News