ಕಾರು ಢಿಕ್ಕಿ: ಬಾಲಕನ ಕಾಲು ಮುರಿತ
Update: 2017-11-10 20:18 IST
ಮಂಡ್ಯ, ನ.10: ರಸ್ತೆದಾಟುತ್ತಿದ್ದ ಶಾಲಾ ಬಾಲಕನಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕನ ಕಾಲು ಮುರಿದಿರುವ ಘಟನೆ ತಾಲೂಕಿನ ಹಳೇಬೂದನೂರು ಗ್ರಾಮದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.
1ನೆ ತರಗತಿ ಓದುತ್ತಿದ್ದ ಗಣೇಶ(6) ಗಾಯಗೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಈತ ಶಾಲೆ ಮುಂಭಾಗದ ಬೆಂಗಳೂರು-ಮೈಸೂರು ಹೆದ್ದಾರಿ ದಾಟುತ್ತಿದ್ದಾಗ ಈ ಘಟನೆ ನಡೆದಿದ್ದು, ಬಾಲಕನನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಗ್ರಾಮಾಂತರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.