×
Ad

ಶಾಸಕ ಆನಂದ್ ಸಿಂಗ್‌ಗೆ ಬಿಜೆಪಿಯಿಂದ ನೋಟಿಸ್

Update: 2017-11-10 20:30 IST

ಬೆಂಗಳೂರು, ನ.10: ಪಕ್ಷದ ನಿಲುವಿಗೆ ವಿರುದ್ಧವಾಗಿ ಟಿಪ್ಪು ಸುಲ್ತಾನ್ ಜಯಂತಿಯಲ್ಲಿ ಭಾಗವಹಿಸಿದ ವಿಜಯನಗರ(ಬಳ್ಳಾರಿ) ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರಿಗೆ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ.

ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಲ್ಲದೆ ಅದನ್ನು ಬಹಿರಂಗವಾಗಿ ಸಮರ್ಥನೆ ಮಾಡಿಕೊಂಡಿರುವುದರಿಂದ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಎನ್. ಶಂಕರಪ್ಪ, ಆನಂದ್ ಸಿಂಗ್ ಅವರಿಗೆ ನೋಟಿಸ್ ನೀಡಿದ್ದಾರೆ.

ಈ ಸಂಬಂಧ ಏಳು ದಿನಗಳ ಒಳಗೆ ವಿವರಣೆ ನೀಡಬೇಕೆಂದು ನೋಟಿಸ್ ನಲ್ಲಿ ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News