ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
Update: 2017-11-10 22:07 IST
ಕೋಟ, ನ.10: ವೈಯಕ್ತಿಕ ಕಾರಣದಿಂದ ಮನನೊಂದ ಯಡಾಡಿ ಮತ್ಯಾಡಿ ಗ್ರಾಮದ ಬೆಮ್ಮರ್ಕಿ ನಿವಾಸಿ ಗೀತಾ (38) ಎಂಬವರು ನ.10ರಂದು ಬೆಳಗಿನ ಜಾವ ಮನೆ ಸಮೀಪದ ತೋಟದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿರಿಯಡ್ಕ: ಪೆರ್ಡೂರು ಗ್ರಾಮದ ಸಿಂಡಿಕೇಟ್ ಬ್ಯಾಂಕ್ ಬಳಿಯ ನಿವಾಸಿ ದಿನೇಶ್ ಆಚಾರ್ಯ(52) ಎಂಬವರು ನ.9ರಂದು ಸಂಜೆ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.