ಲಾರಿ ಢಿಕ್ಕಿ: ಆಟೊ ಚಾಲಕ ಮೃತ್ಯು
Update: 2017-11-10 22:28 IST
ಕಾಸರಗೋಡು, ನ. 10: ಆಟೊ ರಿಕ್ಷಾ - ಲಾರಿ ನಡುವೆ ನಡೆದ ಅಪಘಾತದಲ್ಲಿ ಆಟೊ ಚಾಲಕ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ನಡೆದಿದೆ.
ಮೃತರನ್ನು ಕುಂಬಳೆ ಶಾಂತಿಪಳ್ಳದ ಕಿರಣ್ ( 29) ಎಂದು ಗುರುತಿಸಲಾಗಿದೆ.
ಕಾಸರಗೋಡು ಕಡೆಯಿಂದ ಮಂಗಳೂರು ನತ್ತ ತೆರಳುತ್ತಿದ್ದ ಲಾರಿ ಮತ್ತು ಕುಂಬಳೆ ಕಡೆಗೆ ಹೋಗುತ್ತಿದ್ದ ರಿಕ್ಷಾ ನಡುವೆ ಅಪಘಾತ ನಡೆದಿದೆ.
ಅಪಘಾತದಿಂದ ಆಟೊ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಂಭೀರ ಗಾಯಗೊಂಡ ಕಿರಣ್ ರನ್ನು ಕುಂಬಳೆ ಆಸ್ಪತ್ರೆಗೆ ತಲುಪಿಸಿದರೂ ಆಗಲೇ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.