ಪತ್ರಕರ್ತ ಮಹಂತೇಶ್ ನಿಧನ
Update: 2017-11-13 19:42 IST
ಮಡಿಕೇರಿ, ನ.13: ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮಿತ್ರ ದಿನಪತ್ರಿಕೆಯ ಹಿರಿಯ ವರದಿಗಾರ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಕೆ.ಬಿ.ಮಹಂತೇಶ್ (49) ಸೋಮವಾರ ಬೆಳಗ್ಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು.
ಮಹಂತೇಶ್ ನಿಧನಕ್ಕೆ ಪತ್ರಿಕಾ ಭವನ ಟ್ರಸ್ಟ್, ಜಿಲ್ಲಾ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್, ಜಿಲ್ಲೆಯ ಎಲ್ಲಾ ಪತ್ರಕರ್ತರು ಹಾಗೂ ವಿವಿಧ ಸಂಘ ಸಂಸ್ಥೆಗಳು ಸಂತಾಪ ಸೂಚಿಸಿದ್ದಾರೆ.
ಮೃತರು ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಹುಟ್ಟೂರಾದ ಧಾರಾವಾಡ ಬಳಿಯ ಬೈಲಹೊಂಗಲದಲ್ಲಿ ನ.14 ರಂದು ನಡೆಯಲಿದೆ.