ರಾಜ್ಯ ಮಟ್ಟದ ಕ್ರೀಡಾಕೂಟ ಸಮಾರೋಪ
ಬ್ರಹ್ಮಾವರ, ನ.13: ಸಾಧನೆಗೆ ಕಠಿಣ ಪರಿಶ್ರಮ ಬೇಕು. ಸರಿಯಾದ ತರಬೇತಿ ಇದ್ದರೆ ಮಾತ್ರ ಗೆಲುವು ಸಾಧ್ಯ ಎಂದು ನಟ, ನಿರ್ದೇಶಕ, ನಿರ್ಮಾಪಕ ಡಾ.ರಾಜಶೇಖರ ಕೋಟ್ಯಾನ್ ಹೇಳಿದ್ದಾರೆ. ಬ್ರಹ್ಮಾವರದ ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಇಂದು ಸಂಜೆ ಮುಕ್ತಾಯಗೊಂಡ ಪದವಿ ಪೂರ್ವ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂದಲ್ಲಿ ಅವರು ಮಾತನಾಡಿದರು.
ಓ.ಎಸ್.ಸಿ ಶಿಕ್ಷಣ ಸಂಸ್ಥೆಯ ಸಂಚಾಲಕ ವಂ. ಸಿ.ಎ.ಐಸಾಕ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಪಂನ ಮಾಜಿ ಅಧ್ಯಕ್ಷ ಬಿ.ಭುಜಂಗ ಶೆಟ್ಟಿ, ಉದ್ಯಮಿ ಸಂತೋಷ್ ಕೋಟ್ಯಾನ್, ಓ.ಎಸ್.ಸಿ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಅನಿಲ್ ರೋಹಾನ್, ಟ್ರಸ್ಟಿ ಅನಿಲ್ ರೋಡಿಗ್ರಸ್, ಉದ್ಯಮಿ ಕೆ.ಬಾಲಕೃಷ್ಣ ಹೆಗ್ಡೆ, ಯುವಜನ ಸೇವಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಕ್ರೀಡಾ ಸಂಯೋಜಕ ದಿನೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕ್ರೀಡಾಕೂಟದ ಯಶಸ್ಸಿಗೆ ಶ್ರಮಿಸಿದ ಎಸ್.ಎಂ.ಎಸ್ ಪ.ಪೂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸತ್ಯನಾರಾಯಣ ನಾಯಕ್, ಸಂಸ್ಥೆಯ ಸಂಚಾಲಕ ಸಿ.ಎ.ಐಸಾಕ್ ಮತ್ತು ಸಂಸ್ಥೆಯ ಪ್ರಾಂಶುಪಾಲ ಐವನ್ ದೊನಾತ್ ಸುವಾರಿಸ್ ಅವರನ್ನು ಇಾಖೆಯ ವತಿಯಿಂದ ಸನ್ಮಾನಿಸಲಾಯಿತು.
ಡಿಡಿಪಿಯು ವಿಜಯಲಕ್ಷ್ಮಿ ಬಿ.ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಂಶುಪಾಲ ಐವನ್ ದೊನಾತ್ ಸುವಾರಿಸ್ ಸ್ವಾಗತಿಸಿದರು.ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸತ್ಯನಾರಾಯಣ ನಾಯಕ್ ವಂದಿಸಿದರು. ಆರೂರು ತಿಮ್ಮಪ್ಪ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.