ವ್ಯಾಸಂಗ ವೇತನ, ಶುಲ್ಕ ವಿನಾಯಿತಿಗೆ ಅರ್ಜಿ ಆಹ್ವಾನ
Update: 2017-11-13 21:36 IST
ಉಡುಪಿ, ನ.13: ಪಿಎಚ್‌ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಇತರೆ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳ ಮಾಸಿಕ 5000 ರೂ.ನಂತೆ ವ್ಯಾಸಂಗ ವೇತನ ಫೆಲೋ ಶಿಪ್ ಹಾಗೂ ನಿಗದಿತ ಶುಲ್ಕ ವಿನಾಯಿತಿಗೆ ಅರ್ಜಿ ಆಹ್ವಾನಿಸಲಾಗಿ
2017-18ನೆ ಸಾಲಿನಲ್ಲಿ ಮುಂದುವರಿಯುತ್ತಿರುವ ಅರ್ಹ ವಿದ್ಯಾರ್ಥಿಗಳು ಹಾಗೂ ಹೊಸ ವಿದ್ಯಾರ್ಥಿಗಳು ಡಿ.7ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ www.backwardclasses.kar.nic.in ಅನ್ನು ಅಥವಾ ದೂರವಾಣಿ ಸಂಖ್ಯೆ:0820-65970004/2573881ನ್ನು ಸಂಪರ್ಕಿ ಸಬಹುದು ಎಂದು ಉಡುಪಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.