ಸಾಲಬಾಧೆ: ರೈತ ಆತ್ಮಹತ್ಯೆ
Update: 2017-11-13 21:49 IST
ಮದ್ದೂರು, ನ.13: ಸಾಲಬಾಧೆ ತಾಳಲಾರದೆ ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನೀಲಕಂಠನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಮ್ಮಯ್ಯ ಅವರ ಪುತ್ರ ಬಸವೇಗೌಡ ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ.
ಬಸವೇಗೌಡ ಕೃಷಿ ಚಟುವಟಿಕೆಗಾಗಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದು, ಬರದ ಹಿನ್ನೆಲೆಯಲ್ಲಿ ಬೆಳೆ ಒಣಗಿ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಈಚೆಗೆ ಸಾಲಗಾರರ ಕಾಟ ಹೆಚ್ಚಾಗಿತ್ತು. ಈ ಸಂಬಂಧ ನ್ಯಾಯಾಲಯದಲ್ಲಿ ದಾವೆಯನ್ನೂ ಹೂಡಲಾಗಿತ್ತು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಎಂದು ದೂರು ನೀಡಲಾಗಿದೆ.
ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.