ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ
ಮಂಗಳೂರು, ನ. 13: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997ರ ಕಲಂ 25 ರನ್ವಯ ಮಂಗಳೂರು ತಾಲೂಕು ಬೋಳಾರ ಗ್ರಾಮದ ಹಳೆಕೋಟೆ ಶ್ರೀ ಮುಖ್ಯಪ್ರಾಣ ದೇವಸ್ಥಾನ ಹಾಗೂ ಮಂಗಳೂರು ತಾಲೂಕು ಕಡಂದಲೆ ಗ್ರಾಮದ ಶ್ರೀ ಸುಬ್ರಮಣ್ಯ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿಯ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಮೂರು ವರ್ಷಗಳ ಅವಧಿಗಾಗಿ 9 ಜನ ಸದಸ್ಯರನ್ನು ಒಳಗೊಂಡು ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತ ಭಕಾತಿದಿಗಳಿಂದ ನಿಗದಿತ ನಮೂನೆ- 1 (ಬಿ) (22ನೆ ನಿಯಮ) ರಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಭಕ್ತಾರು ನಿಗಧಿತ ಅರ್ಜಿ ನಮೂನೆ 1 (ಬಿ) ಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಡಿ. 6ರಂದು ಸಂಜೆ 5:30ರೊಳಗಾಗಿ ದ.ಕ. ಜಿಲ್ಲಾ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರಿಗೆ ಸ್ವೀಕೃತವಾಗುವಂತೆ ಸಲ್ಲಿಸಬೇಕು.
ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾ ದಾಯ ದತ್ತಿಗಳ ಇಲಾಖೆ ಹಾಗೂ ಪದನಿಮಿತ್ತ ಕಾರ್ಯದರ್ಶಿ, ಜಿಲ್ಲಾ ಧಾರ್ಮಿಕ ಪರಿಷತ್, ದ.ಕ. ಮಂಗಳೂರು ಇವರನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.