ಕಾನೂನಿನ ಬಗ್ಗೆ ಪ್ರತಿಯೊಬ್ಬರು ತಿಳಿಯಬೇಕು: ನಾಗೇಶ್
ಹನೂರು, ನ.13: ಕಾನೂನು ತಿಳುವಳಿಕೆಗಳ ಬಗ್ಗೆ ಪ್ರತಿಯೊಬ್ಬ ನಾಗರಿಕರು ತಿಳಿದುಕೊಳ್ಳಬೇಕು ಎಂದು ಸಹಾಯಕ ಸರ್ಕಾರಿ ಅಭಿಯೋಜಕ ಎಂ.ನಾಗೇಶ್ ತಿಳಿಸಿದ್ದಾರೆ.
ಪಟ್ಟಣದ ಸಮೀಪದ ರಾಮಾಪುರ ಗ್ರಾಮ ಪಂಚಾಯತ್ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಅಭಿಯೋಜನಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕ ಪಂಚಾಯತ್ ಇತರೆ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕಾನೂನು ಸಾಕ್ಷರತಾ ಅಭಿಯಾನದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣು ಮಕ್ಕಳು ತಮ್ಮ ಹಕ್ಕುಗಳು, ಕಾನೂನನ್ನು ಬಳಕೆ ಮಾಡಿಕೊಳ್ಳುವ ಮೂಲಕ ದೌರ್ಜನ್ಯ ತಡೆಯಬೇಕು. ನೀವು ತಿಳಿದುಕೊಂಡಿರುವ ಜ್ಞಾನವನ್ನು ಇತರರಿಗೂ ತಿಳಿಸಬೇಕು, ಕಾನೂನು ಅರಿವಿದ್ದಾಗ ಮಾತ್ರ ಸಮಸ್ಯೆಗಳಿಂದ ಹೊರಬರಬಹುದು ಎಂದರು.
ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷೆ ನಲ್ಲಮ್ಮ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯೆ ರೂಪಶ್ರೀ ವಕೀಲರಾದ ರಾಧಕೃಷ್ಣ, ಚಂದ್ರಕುಮಾರ್, ರವಿಸೆಂದಿಲ್, ಮಹಾದೇವಸ್ವಾಮಿ, ರಾಜಣ್ಣ, ವೈದ್ಯಾಧಿಕಾರಿ ಪ್ರಕಾಶ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹಾದೇವಸ್ವಾಮಿ, ಶಿವಲೀಲಾ ಲಂಗೋಟಿ, ಎಎಸ್ಸೈ ನಾಗೇಂದ್ರ ರಾವ್, ಸಂಘ ಸಂಸ್ಥೆಯ ಸದಸ್ಯರುಗಳು ಇದ್ದರು.