×
Ad

​ವಿಕಾಸ್ ಕಾಲೇಜಿನ ವಾರ್ಷಿಕೋತ್ಸವ

Update: 2017-11-13 23:01 IST

ಮಂಗಳೂರು, ನ. 13: ನಗರದ ವಿಕಾಸ್ ಕಾಲೇಜಿನ ವಾರ್ಷಿಕೋತ್ಸವ ಶನಿವಾರ ನೆರವೇರಿತು.ಬಲ್ಮಠ ಸರಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜು ವ್ಯವಹಾರ ಆಡಳಿತ ವಿಭಾಗ ಮುಖ್ಯಸ್ಥ ಚಂದ್ರಶೇಖರ್ ಕೆ. ಮಾತನಾಡಿ, ವಿಜ್ಞಾನ ನಮ್ಮನ್ನು ತಯಾರಿ ಮಾಡುತ್ತದೆ. ಭಾರತೀಯರಾದ ನಾವು ಶಿಸ್ತು ಮತ್ತು ಸ್ವಚ್ಛತೆಯನ್ನು ಮರೆತಿದ್ದೇವೆ. ವಿದ್ಯಾರ್ಥಿಗಳು ಶಿಕ್ಷಣ ಪಡೆದ ನಂತರ ಉದ್ಯೋಗಕ್ಕೆ ವಿದೇಶಗಳಿಗೆ ಹೋದರೂ ಮಾನಸಿಕವಾಗಿ ಭಾರತೀಯರೇ ಆಗಿರಬೇಕು ಎಂದರು. 

ಮಾಜಿ ಸಚಿವ ಹಾಗೂ ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷರೂ ಆಗಿರುವ ಕೃಷ್ಣ ಜೆ. ಪಾಲೆಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಪ್ರೊಫೆಸರ್ ಟಿ. ರಾಜಾರಾಮ್ ರಾವ್, ವಿಕಾಸ್ ಎಜ್ಯುಕೇಶನ್ ಟ್ರಸ್ಟ್‌ನ ಟ್ರಸ್ಟಿಗಳಾದ ಜೆ ಕೊರಗಪ್ಪ, ವಿಕಾಸ್ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ. ರಮೇಶ್ ಕೆ., ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯ ಸಮನ್ವಯಾಧಿಕಾರಿ ಪಾರ್ಥಸಾರಥಿ ಪಾಲೆಮಾರ್ ಉಪಸ್ಥಿತರಿದ್ದರು.

ವಿಕಾಸ್ ಕಾಲೇಜಿನ ಸಂಚಾಲಕ ಡಾ.ಡಿ. ಶ್ರೀಪತಿ ರಾವ್ ಸ್ವಾಗತಿಸಿದರು. ವಾಣಿಜ್ಯ ಉಪನ್ಯಾಸಕಿ ಐಶ್ವರ್ಯಾ ಕೆ ವಂದಿಸಿದರು. ವಿಕಾಸ್ ಕಾಲೇಜಿನ ಆಡಳಿತಾಧಿಕಾರಿ ವಿದ್ಯಾ ಕಾಮತ್ ಕಾರ್ಯಕ್ರಮ ನಿರೂಪಿಸಿದರು.2017 ರ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶಾಲಿನಿ ಬಿ. ಎಂ., ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸೌಹಾರ್ದ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಪಡೆದ ಕಾಸ್ ಕಾಲೇಜಿನ ಬಾಲಕಿಯರ ಕಬಡ್ದಿ ತಂಡದ ಕೋಚ್ ಆಗಿರುವ ಸುಮಿತಾರನ್ನು ಸನ್ಮಾನಿಸಲಾಯಿತು. ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News