ಮನಸ್ಸು ಕಟ್ಟುವ ಕೆಲಸವಾಗಲಿ: ರಾಮಣ್ಣ

Update: 2017-11-13 18:11 GMT

ಚಿಕ್ಕಮಗಳೂರು, ನ.13: ಸಮಾಜದಲ್ಲಿಂದು ಅಭಿವೃದ್ಧಿಯ ಹೆಸರಿನಲ್ಲಿ ಕಾರ್ಖಾನೆಗಳು ಮತ್ತು ಅರಮನೆಗಳನ್ನು ಕಟ್ಟುವುದಕ್ಕಿಂತ ಮೊದಲು ಮನುಷ್ಯರ ಮನಸ್ಸುಗಳನ್ನು ಕಟ್ಟುವ ಕೆಲಸವಾಗಬೇಕಿದೆ ಎಂದು ಖ್ಯಾತ ತತ್ವಪದ ಗಾಯಕ ಯುಗಧರ್ಮದ ರಾಮಣ್ಣ ಅಭಿಪ್ರಾಯಿಸಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪುರಸಭೆ ಅಧ್ಯಕ್ಷೆ ಶಿಲ್ಪಾರಾಜಶೇಖರ್ ಅವರ ಮನೆ ಅಂಗಳದಲ್ಲಿ ಏರ್ಪಡಿಸಿದ್ದ ಚಿಂತನ ಗೋಷ್ಠಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿ ನಗರಸಭೆ ಅಧ್ಯಕ್ಷೆ ಶಿಲ್ಪಾರಾಜಶೇಖರ್ ಮಾತನಾಡಿ, ನಾಡಿನಲ್ಲಿ ಕನ್ನಡ ಉಳಿಯಬೇಕಾದರೆ, ಕನ್ನಡಿಗರು ಆಂಗ್ಲಭಾಷೆಯ ವ್ಯಾಮೋಹ ಬಿಡಬೇಕು. ಮಾತೃಭಾಷೆಯನ್ನು ಹೆಚ್ಚ ಬಳಸುವ ಮೂಲಕ ಮುಂದಿನ ಪೀಳಿಗೆಗೂ ಉಳಿಸಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಾಹಿತಿ ಬೆಳವಾಡಿ ಮಂಜುನಾಥ್, ನಗರಸಭೆೆ ಸದಸ್ಯ ಟಿ.ರಾಜಶೇಖರ್, ನಿವೃತ್ತ ಅಭಿಯಂತ ನಾರಾಯಣ ಮಲ್ಯ, ಶರಣ ಸಾಹಿತ್ಯ ಪರಿಷತ್‌ನ ಜಿಲ್ಲಾ ಕಾರ್ಯದರ್ಶಿ ಪ್ರಭು ಸೂರಿ, ಚಂಚಲಾ ಅಶೋಕ್ ಉಪಸ್ಥಿತರಿದ್ದರು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಮಂಜುನಾಥ ನಿರೂಪಿಸಿ, ಖಜಾಂಚಿ ಪ್ರೊ.ಕೆ.ಎನ್.ಲಕ್ಷ್ಮೀಕಾಂತ್ ಸ್ವಾಗತಿಸಿ, ತಾಲೂಕು ಕಸಾಪ ಕಾರ್ಯದರ್ಶಿ ಸುರೇಶ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News