ಬಡ್ಡಿ ವ್ಯವಹಾರ ಆರೋಪ: ಮಹಿಳೆ ಬಂಧನ
Update: 2017-11-14 18:35 IST
ಬೆಂಗಳೂರು, ನ.14: ಹಣಕಾಸಿನ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ಕೋಡಿಪಾಳ್ಯದ ಶೀಲಾ(31) ಬಂಧಿತ ಮಹಿಳೆ ಎಂದು ಪೊಲೀಸರು ಗುರುತಿಸಿದ್ದಾರೆ.
ಕೋಡಿಪಾಳ್ಯದ ಅಪಾರ್ಟ್‌ಮೆಂಟ್ ಒಂದರಲ್ಲಿ ಹಣಕಾಸಿನ ದುಬಾರಿ ಬಡ್ಡಿ ವ್ಯವಹಾರ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿ ಶೀಲಾ ಬಳಿಯ ಚೆಕ್‌ಗಳು, ನೋಟ್ ಪುಸ್ತಕ ಇತ್ಯಾದಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿದೆ.