ಮಕ್ಕಳ ಹಕ್ಕುಗಳ ಕುರಿತಾಗಿ ಮಾಹಿತಿ ಕಾರ್ಯಗಾರ

Update: 2017-11-14 13:37 GMT

ಮಂಗಳೂರು, ನ.14: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಚೈಲ್ಡ್‌ಲೈನ್ 1098 ಇವುಗಳ ಸಹಯೋಗದಲ್ಲಿ ನ.14ರಂದು ಮಕ್ಕಳ ಪಾಲನೆ ಮತ್ತು ಪೋಷಣೆ ಮಾಡುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಮುಖ್ಯಸ್ಥರಿಗೆ ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳ ಹಕ್ಕುಗಳ ಕುರಿತಾಗಿ ಮಾಹಿತಿ ಕಾರ್ಯಗಾರವು ಮಂಗಳವಾರ ಜಿಲ್ಲಾ ಬಾಲಭವನದಲ್ಲಿ ನಡೆಯಿತು.

ತರಬೇತಿ ಕಾರ್ಯಗಾರವನ್ನು ಸರಕಾರಿ ಬಾಲಕರ ಬಾಲಮಂದಿರದ ಕುಮಾರ್ ದೀಕ್ಷಿತ್ ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಉಸ್ಮಾನ್ ಎ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಕ್ಕಳ ರಕ್ಷಣಾಧಿಕಾರಿ (ಸಾಂಸ್ಥಿಕ) ಕುಮಾರ್ ಶೆಟ್ಟಿಗಾರ್ ಕಾರ್ಯಕ್ರಮವನ್ನು ನಿರೂಪಿಸಿದರು.

ತರಬೇತಿ ಕಾರ್ಯಗಾರದಲ್ಲಿ ೞಚೈಲ್ಡ್‌ಲೈನ್‌ಸೆ ದೋಸ್ತಿ ಸಪ್ತಾಹೞಕ್ಕೆ ಚಾಲನೆ ನೀಡಲಾಯಿತು. ಮಕ್ಕಳ ಗ್ರಾಮಸಭೆ ಕುರಿತು ಬಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು. ಹಾಗೂ ತಂಬಾಕು ಮುಕ್ತ ರಾಜ್ಯ ಲೋಗೋ ವಿನ್ಯಾಸ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ವಿಜೇತರಾದ 5 ಮಕ್ಕಳನ್ನು ಸನ್ಮಾನಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಯವಾದಿ ಕೆ. ನಿಖೇಶ್ ಶೆಟ್ಟಿ ಭಾಗವಹಿಸಿದ್ದರಿ. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೆನ್ನಿ ಡಿಸೋಜ ಮಕ್ಕಳ ಪಾಲನಾ ಪೋಷಣಾ ಸಂಸ್ಥೆಗಳ ಬಗ್ಗೆ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಪ್ರೀತಮ್ ರೊಡಿಗ್ರಸ್ ಪೊಕ್ಸೊ ಕಾಯ್ದೆ ಬಗ್ಗೆ ಹಾಗೂ ಶಾಂತಿ ಸಂದೇಶದ ಸಿಸ್ಟರ್ ಸೆಲಿನ್ ಸಮಾಲೋಚನೆಯ ಕುರಿತು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News