ಗಿರೀಶ್ ಕರ್ನಾಡ್, ಕಂಬಾರ ಭಾವಚಿತ್ರಕ್ಕೆ ಹೂ ಹಾಕಿ ಪೂಜೆ ಮಾಡಿ ಅಚಾತುರ್ಯ
Update: 2017-11-14 20:14 IST
ಬೆಂಗಳೂರು, ನ.14: ಧಾರವಾಡದ ಕಲಾಭವನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಗ್ರಂಥಾಲಯ ಸಪ್ತಾಹದಲ್ಲಿ ಜೀವಂತವಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಗಿರೀಶ್ ಕಾರ್ನಾಡ್ ಹಾಗೂ ಚಂದ್ರಶೇಖರ ಕಂಬಾರ ಭಾವಚಿತ್ರಕ್ಕೆ ವಿಭೂತಿ ಹಚ್ಚಿ, ಹೂವಿನ ಹಾರ ಹಾಕಿ ಪೂಜೆ ಮಾಡಿರುವ ಅಚಾತುರ್ಯ ಮಂಗಳವಾರ ನಡೆದಿದೆ.
ಭಾರತೀಯ ಸಂಪ್ರದಾಯದಲ್ಲಿ ಸತ್ತ ವ್ಯಕ್ತಿಯ ಭಾವಚಿತ್ರಕ್ಕೆ ಮಾತ್ರ ವಿಭೂತಿ ಬಳಿಯುವುದು, ಹೂ ಹಾಕುವುದು ಹಾಗೂ ಪೂಜೆ ಮಾಡುವುದು. ಆದರೆ, ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇನ್ನೂ ಜೀವಂತವಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಭಾವಚಿತ್ರಕ್ಕೆ ಪೂಜೆ ಮಾಡಿರುವುದನ್ನು ಕಂಡ ಶಿಕ್ಷಣ ಸಚಿವ ತನ್ವೀರ್ ಸೇಠ್ ಅಧಿಕಾರಗಳ ವಿರುದ್ಧ ಹರಿಹಾಯ್ದಿದ್ದಾರೆ ಎಂದು ತಿಳಿದು ಬಂದಿದೆ.