ದುಬೈ: ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮಾವೇಶ

Update: 2017-11-14 15:13 GMT

ದುಬೈ, ನ.14: ದುಬೈಯಲ್ಲಿರುವ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಮಾವೇಶ ದುಬೈ ಗ್ರಾಂಡ್ ಪ್ಲಾಝಾ ಹೊಟೇಲ್ ಖ್ವಾಸಿಸ್ ನಲ್ಲಿ ಇತ್ತೀಚೆಗೆ ನಡೆಯಿತು.

ಈ ಸಮಾವೇಶದಲ್ಲಿ ಭಾಗವಹಿಸಿದ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಡಾ. ಉದಯ ಕುಮಾರ್ ಇರ್ವತ್ತೂರು ಮಾತನಾಡುತ್ತಾ 150 ವರ್ಷ ಇತಿಹಾಸವಿರುವ ಕಾಲೇಜಿನ ಹಳೆ ವಿದ್ಯಾರ್ಥಿಗಳು ತಾವಿರುವ ಪ್ರದೇಶದಲ್ಲಿ ಸಂಘಟಿತರಾಗಬೇಕು. 2018ರಲ್ಲಿ ಕಾಲೇಜಿನ 150 ವರ್ಷಾಚರಣೆಯ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರ ನೇತೃತ್ವದಲ್ಲಿ ಕುಲಪತಿ ಕೆ.ಬೈರಪ್ಪರ ಸಹಕಾರದೊಂದಿಗೆ ಹಮ್ಮಿಕೊಂಡಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ತಿಳಿಸಿದರು.

ಹಳೆ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಕಾಲೇಜಿನ ಅಭಿವೃದ್ಧಿ ಯೋಜನೆ ಸಹಾಯ ನೀಡುವ ಬಗ್ಗೆ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಉಪನ್ಯಾಸಕಿ ರಾಜಲಕ್ಷ್ಮೀ ಹಳೆ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ಅಭಿವೃದ್ಧಿಯೋಜನೆಗೆ ಸಹಕರಿಸುವಂತೆ ಮನವಿ ಮಾಡಿದರು.

ಹಳೆ ವಿದ್ಯಾರ್ಥಿಗಳಾದ ಎ.ಶೌಕತ್ ಅಲಿ, ದಯಾ ಕಿರೋಡಿಯನ್, ಸಿರಾಜ್ ಪಜೀರ್, ಮುಹಮ್ಮದ್ ಅಲಿ ಉಚ್ಚಿಲ್, ಪ್ರವೀಣ್, ಸದಾಶಿವ ದಾಸ್ ಮೊದಲಾದವರು ಉಪಸ್ಥಿತರಿದ್ದರು.

ಶೌಕತ್ ಅಲಿ ಕಾರ್ಯಕ್ರಮ ನಿರೂಪಿಸಿದರು. ದಯಾ ಕಿರೋಡಿಯನ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News