ಕಲಬುರ್ಗಿ ಹಂತಕರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಿ: ಡಾ.ಬಾಲಚಂದ್ರ ಮಂಗೇಕರ್

Update: 2017-11-14 16:37 GMT

ಬೆಂಗಳೂರು, ನ.14: ಹಿರಿಯ ಸಂಶೋಧಕರಾಗಿದ್ದ ಎಂ.ಎಂ.ಕಲಬುರ್ಗಿ ಹತ್ಯೆ ಭಾರತದ ಪ್ರಜಾಪ್ರಭುತ್ವ, ಸಾಂಸ್ಕೃತಿಕ ಕ್ಷೇತ್ರ ಹಾಗೂ ಸಹಿಷ್ಣುತೆಗೆ ಆದ ದೊಡ್ಡ ಆಘಾತವಾಗಿದೆ. ಹತ್ಯೆಯ ಹಂತಕರನ್ನು ತ್ವರಿತವಾಗಿ ಪತ್ತೆ ಹಚ್ಚಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಬೇಕು ಎಂದು ಮುಂಬೈ ಹಾಗೂ ಪುಣೆ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಬಾಲಚಂದ್ರ ಎಂ.ಮಂಗೇಕರ್ ಆಗ್ರಹಿಸಿದ್ದಾರೆ.

ಮಂಗಳವಾರ ಧಾರವಾಡದಲ್ಲಿರುವ ಎಂ.ಎಂ.ಕಲಬುರ್ಗಿ ಮನೆಗೆ ಭೇಟಿ ನೀಡಿ ಉಮಾದೇವಿ ಕಲಬುರ್ಗಿರೊಂದಿಗೆ ಕುಶಲೋಪರಿ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರ್ಗಿ ಹತ್ಯೆಯ ಅಪರಾಧಿಗಳನ್ನು ಪತ್ತೆ ಮಾಡಿ ಶಿಕ್ಷೆಗೆ ಒಳಪಡಿಸುವ ಮೂಲಕ ದುಷ್ಟರಿಗೆ ಎಚ್ಚರಿಕೆಯ ಸಂದೇಶ ನೀಡಬೇಕು. ಹಾಗೂ ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಉಮಾದೇವಿ ಕಲಬುರ್ಗಿ ಮಾತನಾಡಿ, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದೆ. ಶೀಘ್ರದಲ್ಲಿಯೇ ಕೊಲೆಗಾರರನ್ನು ಪತ್ತೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಕೊಲೆಯ ರಹಸ್ಯ ಬಯಲಾದರೆ ಮಾತ್ರ ನಮ್ಮ ಕುಟುಂಬಕ್ಕೆ ಹಾಗೂ ಕಲಬುರ್ಗಿ ಅಭಿಮಾನಿಗಳಿಗೆ ಸಮಾಧಾನವಾಗಲಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News