ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ
Update: 2017-11-14 22:18 IST
ಉಡುಪಿ, ನ.14: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉಡುಪಿ ಹಾಗೂ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪೆರ್ಡೂರು ಇವರ ಆಶ್ರಯದಲ್ಲಿ ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಉದ್ಯೋಗದ ಕಲೆ ಕುರಿತು ತರಬೇತಿ ಕಾರ್ಯಕ್ರಮ ನಡೆಯಲಿದೆ.
ತರಬೇತಿ ಉಚಿತವಾಗಿದ್ದು, ನ.16ರಿಂದ 25ರವರೆಗೆ ಪೆರ್ಡೂರು ಸರಕಾರಿ ಐಟಿಐ ಕಾಲೇಜಿನಲ್ಲಿ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0820-2574869/9480259790ನ್ನು ಸಂಪರ್ಕಿಸ ಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟನೆ ತಿಳಿಸಿದೆ.