ಪರಿಶಿಷ್ಟ ನೌಕರರ ಭಡ್ತಿ ಮೀಸಲಾತಿ ಮುಂದುವರಿಕೆ ಮಸೂದೆ ಮಂಡನೆ

Update: 2017-11-14 18:50 GMT

ಬೆಳಗಾವಿ, ನ.14: ಪರಿಶಿಷ್ಟ ನೌಕರರ ಭಡ್ತಿ ಮೀಸಲಾತಿ ಮುಂದುವರಿಕೆಗೆ ಅವಕಾಶ ಕಲ್ಪಿಸುವ ‘ಕರ್ನಾಟಕ(ರಾಜ್ಯದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ) ಮೀಸಲಾತಿ ಆಧಾರದ ಮೇಲೆ ಭಡ್ತಿ ಹೊಂದಿರುವ ಸರಕಾರಿ ನೌಕರರಿಗೆ ತತ್ಪರಿಣಾಮವಾದ ಜೇಷ್ಠತೆಯನ್ನು ವಿಸ್ತರಿಸುವ ವಿಧೇಯಕ-2017’ವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಮಂಗಳವಾರ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ಗದ್ದಲದ ಮಧ್ಯೆಯೆ ಸ್ಪೀಕರ್ ಕೋಳಿವಾಡ ಅವರು, ವಿಧೇಯಕ ಮಂಡನೆಗೆ ಅವಕಾಶ ಕಲ್ಪಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ಕಾನೂನು ಸಚಿವ ಟಿ.ಬಿ.ಜಯಚಂದ್ರ, ವಿಧೇಯಕವನ್ನು ಮಂಡನೆ ಮಾಡಿದರು.
 
ಸಂವಿಧಾನದ 16(4ಎ) ಅನುಚ್ಛೇದದ ಅನುಸರಣೆಯಲ್ಲಿ 1978ರ ಎಪ್ರಿಲ್ 27ರಂದು ಜಾರಿಗೆ ಬರುವಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳಿಗೆ ಮೀಸಲಾತಿಯ ಆಧಾರದ ಮೇಲೆ ಭಡ್ತಿ ಹೊಂದಿದ ಸರಕಾರಿ ನೌಕರರ ತತ್ಪರಿಣಾಮದ ಜೇಷ್ಠತೆಯನ್ನು ಉಪಬಂಧಿಸುವುದು ಅವಶ್ಯವೆಂದು ಪರಿಗಣಿಸಲಾಗಿದೆ. ಆದುದರಿಂದ ಈ ವಿಧೇಯಕ ತರಲಾಗಿದೆ ಎಂದು ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News