ದುಬೈ: ಡಿ.1ರಂದು ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಮೀಲಾದ್ ಸಮಾವೇಶ

Update: 2017-11-15 10:33 GMT

ದುಬೈ, ನ.15: ಎಸ್ಕೆಎಸ್ಸೆಸ್ಸೆಫ್ ಕರ್ನಾಟಕ ಇದರ ದುಬೈ ಸಮಿತಿಯ ವತಿಯಿಂದ ಡಿಸೆಂಬರ್ 1ರಂದು ಮೀಲಾದ್ ಸಮಾವೇಶ ಹಾಗೂ 47ನೆ ಯುಎಇ ರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮವು ದೇರಾ ದುಬೈಯ ಹೋಟೆಲ್ ಪರ್ಲ್ ಕ್ರೀಕ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಅಂದು ಮಗ್ರಿಬ್ ನಮಾಝ್ ಬಳಿಕ ಕರ್ನಾಟಕ ಇಸ್ಲಾಮಿಕ್ ಸೆಂಟರ್, ನೂರುಲ್ ಹುದಾ ಇಸ್ಲಾಮಿಕ್ ಅಕಾಡಮಿ, ಶಂಸುಲ್ ಉಲಮಾ ಅರೆಬಿಕ್ ಕಾಲೇಜು ತೋಡಾರ್ ಇವುಗಳ ಸಹಯೋಗದಲ್ಲಿ ಈ ಕಾರ್ಯಕ್ರಮದಲ್ಲಿ ನಡೆಯಲಿದೆ.

ನೂರುಲ್ ಹುದಾ ಇಸ್ಲಾಮಿಕ್ ಅಕಾಡಮಿಯ ಪ್ರಾಂಶುಪಾಲ ಹನೀಫ್ ಹುದವಿ ದೇಲಂಬಾಡಿಯವರು ಮುಹಮ್ಮದ್ ಮುಸ್ತಫಾ(ಸ.) ಅವರ ಕುರಿತು ಮುಖ್ಯ ಭಾಷಣ ಮಾಡುವರು. ಅನೇಕ ಧಾರ್ಮಿಕ ಗುರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಸುನ್ನಿ ಸೆಂಟರ್‌ನ ಬುರ್ದಾ ತಂಡದಿಂದ ಬುರ್ದಾ ಮಜ್ಲಿಸ್, ದಫ್ ಪ್ರದರ್ಶನ ಇರಲಿದೆ ಎಂದು ಎಸ್ಕೆಎಸ್ಸೆಸ್ಸೆಫ್ ಕರ್ನಾಟಕ ಇದರ ದುಬೈ ಸಮಿತಿಯ ಅಧ್ಯಕ್ಷ ಸೈಯದ್ ಅಸ್ಗರ್ ಅಲಿ ತಂಙಳ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News