ಖಾಸಗಿ ವೈದ್ಯರ ಮುಷ್ಕರ: ಚಿಕಿತ್ಸೆ ಸಿಗದೆ ವ್ಯಕ್ತಿ ಮೃತ್ಯು
Update: 2017-11-15 18:41 IST
ಚಾಮರಾಜನಗರ, ನ.15: ರಾಜ್ಯದಲ್ಲಿ ನಡೆಯುತ್ತಿರುವ ಖಾಸಗಿ ವೈದ್ಯರ ಮುಷ್ಕರಕ್ಕೆ ಚಾಮರಾಜನಗರ ಪಟ್ಟಣದ ವ್ಯಕ್ತಿಯೋರ್ವರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಚಾಮರಾಜನಗರ ಸಮೀಪದ ರಾಮಸಮುದ್ರದ ನಾಗಮಲ್ಲೇಶ್(33) ಎಂಬವರು ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ನಾಗಮಲ್ಲೇಶ್ ಅವರು ಎದೆ ನೋವಿನಿಂದ ಬಳಲುತ್ತಿದ್ದು, ಜಿಲ್ಲಾಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೊಂದು ರವಾನಿಸಲಾಗಿತ್ತು. ಆದರೆ ರಾಜ್ಯದಲ್ಲಿ ಖಾಸಗಿ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ನಾಗಮಲ್ಲೇಶ್ ಅವರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.