×
Ad

ವೈದ್ಯರ ಮುಷ್ಕರ: ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ

Update: 2017-11-15 21:05 IST

ಬೆಂಗಳೂರು, ನ.15: ಖಾಸಗಿ ವೈದ್ಯಕೀಯ ಕಾಯ್ದೆ ತಿದ್ದುಪಡಿ ವಿರೋಧಿಸಿ ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ನಡೆಸುತ್ತಿರುವ ಮುಷ್ಕರದಿಂದಾಗಿ ರಾಜ್ಯದಲ್ಲಿ ಸಾವು ನೋವುಗಳು ಹೆಚ್ಚಾಗುತ್ತಿವೆ. ಹೀಗಾಗಿ, ರೋಗಗಳು ಉಲ್ಭಣಿಸದಂತೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ನೆಲಮಂಗಲದ ಡಿ.ವಿ.ಆದಿನಾರಾಯಣ ಶೆಟ್ಟಿ ಅರ್ಜಿ ಸಲ್ಲಿಸಿದ್ದು, ಗುರುವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಸರಕಾರ ಸರಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಿನ ವೈದ್ಯರನ್ನು ನೇಮಿಸಬೇಕು. ವೈದ್ಯಾಧಿಕಾರಿಗಳ ಮುಷ್ಕರದಿಂದಾಗಿ ಸಾವನ್ನಪ್ಪಿದ ಕುಟುಂಬದವರಿಗೆ ಪರಿಹಾರ ನೀಡಬೇಕೆಂದು ಅರ್ಜಿಯಲ್ಲಿ ಕೋರಿದ್ದಾರೆ.

ಮುಷ್ಕರ ನಡೆಸುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಲು ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News