ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದ ಹೈಕೋರ್ಟ್
ಬೆಂಗಳೂರು, ನ.15: ರಾಜ್ಯ ಹೈಕೋರ್ಟ್‌ನಲ್ಲಿ ಖಾಲಿಯಿರುವ 37 ನ್ಯಾಯಮೂರ್ತಿಗಳ ಹುದ್ದೆಗಳ ಶೀಘ್ರ ಭರ್ತಿ ಮಾಡಲು ಕೇಂದ್ರ ಸರಕಾರ ಹಾಗೂ ಸುಪ್ರೀಂ ಕೋರ್ಟ್‌ಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ನಾಲ್ಕು ವಾರ ಮುಂದೂಡಿದೆ.
ಈ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್. ವೇಣುಗೋಪಾಲಗೌಡ, ವಕೀಲರಾದ ಎಸ್. ಬಸವರಾಜು ಮತ್ತು ಬಿ.ಎಂ. ಅರುಣ್ ಸಾರ್ಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಬುಧವಾರ ಈ ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಬಿ.ವಿ.ಆಚಾರ್ಯ ಅವರು, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕಾತಿಯ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿಯೊಂದು ಸಲ್ಲಿಕೆಯಾಗಿದೆ. ಆ ಅರ್ಜಿಯು 12 ವಾರಗಳ ಕಾಲ ಮುಂದೂಡಲ್ಪಟ್ಟಿದೆ. ಹೀಗಾಗಿ, ಈ ಅರ್ಜಿಯನ್ನು ಮುಂದೂಡುವಂತೆ ನ್ಯಾಯಮೂರ್ತಿ ರವಿ ಮಳಿಮಠ ಮತ್ತು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ವಿಭಾಗೀಯ ಪೀಠವನ್ನು ಕೋರಿದರು. ಅದರಂತೆ ನ್ಯಾಯಪೀಠವು ಅರ್ಜಿಯನ್ನು ನಾಲ್ಕು ವಾರ ಮುಂದೂಡಿತು.