ನ.16ರಿಂದ ರಾಷ್ಟ್ರೀಯ ಕುಸ್ತಿ ಚಾಂಪಿಯನ್

Update: 2017-11-15 18:06 GMT

ಇಂದೋರ್, ನ.15: ನ್ಯಾಶನಲ್ ಕುಸ್ತಿ ಚಾಂಪಿಯನ್‌ಶಿಪ್ ಗುರುವಾರ ಇಲ್ಲಿ ಆರಂಭವಾಗಲಿದ್ದು, ಮೂರು ವರ್ಷಗಳ ಬಳಿಕ ಕುಸ್ತಿ ಅಖಾಡಕ್ಕೆ ಇಳಿಯುತ್ತಿರುವ ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತ ಸುಶೀಲ್ ಕುಮಾರ ಎಲ್ಲರ ಗಮನ ಸೆಳೆಯಲಿದ್ದಾರೆ.

ಪುರುಷರ ಫ್ರಿಸ್ಟೈಲ್ ಕುಸ್ತಿಯಲ್ಲಿ ಸುಶೀಲ್ ಕುಮಾರ್ ಪ್ರಮುಖ ಆಟಗಾರನಾಗಿದ್ದಾರೆ. ನಾಲ್ಕು ದಿನಗಳ ಕಾಲ ನಡೆಯಲಿರುವ ಚಾಂಪಿಯನ್‌ಶಿಪ್‌ನಲ್ಲಿ ರಿಯೋ ಒಲಿಂಪಿಕ್ಸ್‌ನಲ್ಲಿ ಕಂಚು ವಿಜೇತೆ ಸಾಕ್ಷಿ ಮಲಿಕ್ ಹಾಗೂ ಗೀತಾ ಫೋಗತ್ ಮಹಿಳೆಯರ ವಿಭಾಗದಲ್ಲಿ ಪ್ರಧಾನ ಆಕರ್ಷಣೆಯಾಗಿದ್ದಾರೆ.

ಲಂಡನ್ ಒಲಿಂಪಿಕ್ಸ್‌ನಲ್ಲಿ ಕಂಚು ವಿಜೇತ ಕುಸ್ತಿಪಟು ಯೋಗೇಶ್ವರ ದತ್ತ ಪ್ರಸ್ತುತ ಟೂರ್ನಿಯಲ್ಲಿ ಆಡುವುದಿಲ್ಲ.

 ಮುಂದಿನ ವರ್ಷ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್‌ನ್ನು ದೃಷ್ಟಿಯಲ್ಲಿಟ್ಟುಕೊಂಡು ಸುಶೀಲ್ ಈ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಸುಶೀಲ್ 74 ಕೆಜಿ ತೂಕ ವಿಭಾಗದಲ್ಲಿ ರೈಲ್ವೇಸ್‌ನ್ನು ಪ್ರತಿನಿಧಿಸಲಿದ್ದಾರೆ. ಜಾರ್ಜಿಯಾದಲ್ಲಿ ತರಬೇತಿ ಪಡೆದು ಕಳೆದವಾರ ಸ್ವದೇಶಕ್ಕೆ ವಾಪಸಾಗಿದ್ದ ಸುಶೀಲ್ 74 ಕೆಜಿ ವಿಭಾಗದಲ್ಲಿ ದಿನೇಶ್ ವಿರುದ್ಧ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಿದ್ದರು.

34ರ ಹರೆಯದ ಸುಶೀಲ್ 2014ರ ಗ್ಲಾಸ್ಗೊ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕೊನೆಯ ಬಾರಿ ಕುಸ್ತಿಕಣದಲ್ಲಿ ಕಾಣಿಸಿಕೊಂಡಿದ್ದು ಆ ಗೇಮ್ಸ್‌ನಲ್ಲಿ ಚಿನ್ನ ಜಯಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News