×
Ad

ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

Update: 2017-11-16 18:33 IST

ನೋಯ್ಡಾ, ನ.16: ಬಿಜೆಪಿ ನಾಯಕ ಹಾಗು ಗ್ರಾಮವೊಂದರ ಮುಖ್ಯಸ್ಥರಾಗಿದ್ದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದ ಘಟನೆ ನೋಯ್ಡಾದಲ್ಲಿ ನಡೆದಿದೆ.

ಹೈಬತ್ ಪುರ್ ಎಂಬಲ್ಲಿ ಶಾಲೆಯೊಂದನ್ನು ನಡೆಸುತ್ತಿರುವ ಬಿಜೆಪಿ ನಾಯಕ ಶಿವ ಕುಮಾರ್ ಅವರು ಚಾಲಕ ಹಾಗು ಅಂಗರಕ್ಷಕರೊಡನೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದರು.

ಈ ಸಂದರ್ಭ ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಕಾರನ್ನು ಓವರ್ ಟೇಕ್ ಮಾಡಿ ಗುಂಡಿನ ಮಳೆಗರೆದಿದ್ದಾರೆ. ದಾಳಿಯಲ್ಲಿ ಶಿವಕುಮಾರ್ ಹಾಗು ಓರ್ವ ಅಂಗರಕ್ಷಕ ಮೃತಪಟ್ಟಿದ್ದಾರೆ.

ಇವರ ಜೊತೆಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News