×
Ad

ಕೊಂಕಣಿ ಸರಳ ಭಾಷೆ: ಮೇಯರ್ ಕವಿತಾ

Update: 2017-11-16 18:58 IST

ಮಂಗಳೂರು, ನ.16: ಕೊಂಕಣಿಯ ಪದ, ಭಾಷೆ, ಉಚ್ಚಾರದಲ್ಲೂ ತನ್ನ ಸೊಗಸುತನವನ್ನು ಮುಂದುವರಿಸುವ ಮೂಲಕ ಅದೊಂದು ಸರಳ ಭಾಷೆ ಎಂದು ಮನಪಾ ಮೇಯರ್ ಕವಿತಾ ಸನಿಲ್ ಹೇಳಿದರು.

ಅವರು ಗುರುವಾರ ನಗರದ ಪುರಭವನದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆದ ಕೊಂಕಣಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಪ್ರತಿಭೆ ಬೆಳಗಲು ಇಂತಹ ಕಾರ್ಯಕ್ರಮಗಳ ಮೂಲಕ ವೇದಿಕೆ ಸಿಕ್ಕಿದೆ ಅದನ್ನು ಸಮರ್ಥವಾಗಿ ಬಳಸಿಕೊಂಡು ಮುಂದೆ ಸಾಗಬೇಕು ಎಂದರು.
ಮುಖ್ಯ ಅತಿಥಿಯಾಗಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರಾಯ್ ಕ್ಯಾಸ್ಟೊಲಿನೋ ಮಾತನಾಡಿ, ಕೊಂಕಣಿ ಭಾಷೆ ರಾಷ್ಟ್ರೀಯ ಭಾಷೆ ಅದನ್ನು ನಿರಂತರವಾಗಿ ದೈನಂದಿನ ಕೆಲಸ ಕಾರ್ಯಗಳಲ್ಲಿ ಬಳಸಿಕೊಳ್ಳುವ ಮೂಲಕ ಭಾಷೆಗೆ ಮತ್ತಷ್ಟೂ ವೇಗ ತಂದುಕೊಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕರ್ನಾಟಕ ಕೊಂಕಣಿ ಅಕಾಡೆಮಿ ಅಧ್ಯಕ್ಷ ಆರ್.ಪಿ. ನಾಯ್ಕ ದಾಂಡೇಲಿ ಮಾತನಾಡಿ, ಕೊಂಕಣಿಗೆ ಭಾಷೆಗೆ ಮಾನ್ಯತೆ ಸಿಕ್ಕಿ 25 ವರ್ಷಗಳು ಸಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ವ್ಯಾಪಿಯಲ್ಲಿ 25 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎರಡು ತಿಂಗಳ ಅವಧಿಯಲ್ಲಿ 8 ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಭಾಷೆ ಅಭಿವೃದ್ಧಿೆ ಕೆಲಸ ಮಾಡುತ್ತಿದ್ದೇವೆ ಎಂದರು.

ಈ ಸಂದರ್ಭ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯ ಲಕ್ಷ್ಮಣ ಪ್ರಭು, ಕೊಂಕಣಿ ಪ್ರಚಾರ ಸಂಚಾಲನದ ಅಧ್ಯಕ್ಷ ಲಾರೆನ್ಸ್ ಡಿಸೋಜ, ಕಾರ್ಯದರ್ಶಿ ಜೇಮ್ಸ್ ಡಿಸೋಜ, ರಿಜಿಸ್ಟ್ರಾರ್ ದೇವದಾಸ್ ಪೈ ಉಪಸ್ಥಿತರಿದ್ದರು. ಸ್ಟ್ಯಾನಿ ಅಲ್ವಾರೀಸ್ ಸ್ವಾಗತಿಸಿದರು. ವಿಕ್ಟರ್ ಮಥಾಯಸ್ ಕಾರ್ಯಕ್ರಮ ನಿರೂಪಿಸಿದರು. ಈ ಬಳಿಕ ಶಾಲಾ ಮಕ್ಕಳಿಂದ ಪ್ರತಿಭಾ ಪ್ರದರ್ಶನ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News