×
Ad

ಮೂವರು ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲು

Update: 2017-11-16 21:45 IST

ಉಡುಪಿ, ನ.17: ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆಯ ಅಶ್ಲೀಲ ಫೋಟೊಗಳನ್ನು ವಾಟ್ಸ್ಆ್ಯಪ್ ನಲ್ಲಿ ರವಾನೆ ಮಾಡಿರುವ ಕುಂದಾಪುರದ ಮೂವರು ಬಿಜೆಪಿ ಮುಖಂಡರ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಹಾಗೂ ಕುಂದಾಪುರ ಪುರಸಭೆ ಉಪಾಧ್ಯಕ್ಷ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ. ಕಿಶೋರ್ ಕುಮಾರ್, ಮುಖಂಡ ರಾಜು ಪೂಜಾರಿ ಹಾಗೂ ಇತರರ ವಿರುದ್ಧ ಕುಂದಾಪುರ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ದೂರು ನೀಡಿದ್ದಾರೆ.

ಆರೋಪಿಗಳೆಲ್ಲರು ಕುಂದಾಪುರ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಸೇರ್ಪಡೆ ಸಂಬಂಧ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವರಾಗಿದ್ದಾರೆ ಎಂದು ತಿಳಿದುಬಂದಿದೆ. ಕುಂದಾಪುರದಲ್ಲಿ ನ.13ರ ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ನಡೆದ ಗದ್ದಲ, ಮೂಲ ಬಿಜೆಪಿಗರ ವಿರುದ್ಧ ಯಡಿಯೂರಪ್ಪ ನೀಡಿದ ಹೇಳಿಕೆ ನಂತರ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.

ಇವರೆಲ್ಲ ಬಿಜೆಪಿ ಕುಂದಾಪುರ ಎಂಬ  ವಾಟ್ಸ್ಆ್ಯಪ್ ಗ್ರೂಪ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಉಡುಪಿ, ಚಿಕ್ಕಮಂಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಬಗ್ಗೆ ಅವಹೇಳನಕರವಾಗಿ ಬರಹಗಳನ್ನು ಪೋಸ್ಟ್ ಮಾಡಿದಲ್ಲದೇ ಅವರಿಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಕಳುಹಿಸಿ, ಮಾನಹಾನಿ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News