×
Ad

ಅಕ್ರಮ ಜಾನುವಾರು ಸಾಗಾಟ ಆರೋಪ: ವಾಹನ ವಶ

Update: 2017-11-16 22:24 IST

ಪುತ್ತೂರು, ನ. 16: ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿದ ನಗರ ಪೊಲೀಸರು ಪಿಕಪ್ ವಾಹನವೊಂದರ ಸಹಿತ 12 ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆ ವೇಳೆ ವಾಹನದಲ್ಲಿದ್ದ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುತ್ತೂರು ನಗರದ ಹೊರವಲಯದ ಕೆದಿಲ ಗ್ರಾಮದ ಸತ್ತಿಕಲ್ಲು ಎಂಬಲ್ಲಿ ಗುರುವಾರ  ಖಚಿತ ವರ್ತಮಾನದ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಆರೋಪಿಗಳು ವಾಹನವನ್ನು ಬಿಟ್ಟು ಕತ್ತಲಲ್ಲಿ ಓಡಿ ಪರಾರಿಯಾಗಿದ್ದಾರೆ.

ಪುತ್ತೂರು ನಗರ ಠಾಣೆ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರ ಮಾರ್ಗದರ್ಶನದಂತೆ ನಗರ ಎಸ್‌ಐ ಅಜಯ್ ಕುಮಾರ್ ಅವರ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಪಿಕಪ್ ವಾಹನದಲ್ಲಿ ತುಂಬಿಸಿ ಸಾಗಾಟ ಮಾಡಲು ಯತ್ನಿಸಲಾಗುತ್ತಿದ್ದ ಹನ್ನೆರಡು ದನಗಳು ಸ್ಥಳದಲ್ಲಿ ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News