×
Ad

ನ.19ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಜಿಲ್ಲೆಗೆ

Update: 2017-11-16 23:33 IST

ಉಡುಪಿ, ನ.16: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.19 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನ.19ರ ಅಪರಾಹ್ನ 2:30ಕ್ಕೆ ಕರ್ನಾಟಕ ಸರಕಾರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡವನ್ನು ಉದ್ಘಾಟಿಸಿ ಬಳಿಕ ಉಡುಪಿ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಬಳಿಕ 3:45ಕ್ಕೆ ಅಂಬಲಪಾಡಿಯ ಶ್ಯಾಮಿಲಿ ಸಭಾಭವನದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಹಾಗೂ ಉಡುಪಿ ಜಿಲ್ಲಾ ಮೀನುಗಾರರ ಸಹಕಾರಿ ಸಂಘ ಇವರ ಸಹಯೋಗದೊಂದಿಗೆ ಮಹಿಳಾ ಮೀನುಗಾರರ ಸಮಾವೇಶ ಉದ್ಘಾಟಿಸುವರಲ್ಲದೇ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕುಂದಾಪುರ ತಾಲೂಕಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ನೂರು ಹಾಸಿಗೆಗಳ ಸುಸಜ್ಜಿತ ಹೆರಿಗೆ ವಾರ್ಡ್‌ಗೆ ಶಿಲಾನ್ಯಾಸ ನೆರವೇರಿಸಿ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News