ಬ್ಯಾರಿ ಅಕಾಡಮಿ ಅಧ್ಯಕ್ಷರ ಅಧಿಕಾರ ಸ್ವೀಕಾರ

Update: 2017-11-17 15:25 GMT

ಮಂಗಳೂರು, ನ.17: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ನಾಲ್ಕನೆ ಅವಧಿಯ ಅಧ್ಯಕ್ಷರಾಗಿ ಕರಂಬಾರು ಮುಹಮ್ಮದ್ ನಗರದ ಅತ್ತಾವರದಲ್ಲಿರುವ ಅಕಾಡಮಿಯ ಕಚೇರಿಯಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಬಳಿಕ ಮಾತನಾಡಿದ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಇದಕ್ಕೆ ಸರ್ವರ ಸಹಕಾರ ಅಗತ್ಯ ಎಂದು ಹೇಳಿದರು.

ಈ ಸಂದರ್ಭ ಅಕಾಡಮಿಯ ಮಾಜಿ ಅಧ್ಯಕ್ಷ ಎಂ.ಬಿ. ಅಬ್ದುಲ್ ರಹ್‌ಮಾನ್, ಬಿ.ಎ. ಮುಹಮ್ಮದ್ ಹನೀಫ್, ರಾಜ್ಯ ಆಹಾರ ಆಯೋಗದ ಸದಸ್ಯ ಬಿ.ಎ. ಮುಹಮ್ಮದ್ ಆಲಿ ಕಮ್ಮರಡಿ ಶುಭ ಹಾರೈಸಿದರು.

ಸಲೀಂ ಬರಿಮಾರು ಬಂಟ್ವಾಳ, ಕೆ.ಎಂ. ಮುಹಮ್ಮದ್ ಅನ್ಸಾರ್ ಬೆಳ್ಳಾರೆ, ಪಿ.ಎಂ. ಹಸನಬ್ಬ ಮೂಡುಬಿದಿರೆ, ಬಶೀರ್ ಅಹ್ಮದ್ ಕಿನ್ಯ, ಮುಹಮ್ಮದ್ ತನ್‌ಸೀಫ್ ಕಿಲ್ಲೂರು, ಅಬ್ದುಲ್ ರಹ್ಮಾನ್ ಕುತ್ತೆತ್ತೂರು, ಬಶೀರ್ ಬೈಕಂಪಾಡಿ, ಆರೀಫ್ ಪಡುಬಿದ್ರೆ, ಹುಸೈನ್ ಕಾಟಿಪಳ್ಳ ಉಪಸ್ಥಿತರಿದ್ದರು.       
ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News