ಹೈದರಾಬಾದ್‌ನಲ್ಲಿ ಉದ್ಯಮ ಶೃಂಗ: ಅಮೆರಿಕ ನಿಯೋಗಕ್ಕೆ ಇವಾಂಕಾ ನೇತೃತ್ವ

Update: 2017-11-18 16:46 GMT

ವಾಶಿಂಗ್ಟನ್,ನ.18: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಹಾಗೂ ಶ್ವೇತಭವನದ ಉನ್ನತ ಸಲಹೆಗಾರ್ತಿಯೂ ಆದ ಇವಾಂಕಾ ಟ್ರಂಪ್, ಈ ತಿಂಗಳ ಅಂತ್ಯದಲ್ಲಿ ಭಾರತದಲ್ಲಿ ನಡೆಯಲ್ಲಿರುವ ಜಾಗತಿಕ ಉದ್ಯಮಶೀಲತಾ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಅಮೆರಿಕ ನಿಯೋಗದ ನೇತೃತ್ವವನ್ನು ವಹಿಸಿಕೊಳ್ಳಲಿದ್ದಾರೆಂದು ಅಮೆರಿಕದ ವಿದೇಶಾಂಗ ಇಲಾಖೆ ತಿಳಿಸಿದೆ.

  ಹೈದರಾಬಾದ್‌ನಲ್ಲಿ ನಡೆಯಲಿರುವ ಈ ಶೃಂಗಸಭೆಯಲ್ಲಿ 170 ರಾಷ್ಟ್ರಗಳ 1500 ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ಭಾರತ ಹಾಗೂ ಅಮೆರಿಕ ಜಂಟಿಯಾಗಿ ಈ ಶೃಂಗಸಭೆಯ ಆತಿಥ್ಯ ವಹಿಸಲಿದೆ. ‘‘ ಮಹಿಳೆಯರು ಮೊದಲು, ಎಲ್ಲರಿಗೂ ಸಮೃದ್ಧಿ’ ಈ ಶೃಂಗಸಬೆಯ ಥೀಮ್ ಆಗಲಿರುವುದು. ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವುದು ಹಾಗೂ ಜಾಗತಿಕವಾಗಿ ಆರ್ಥಿಕ ಬೆಳವಣಿಗೆಯನ್ನು ತ್ವರಿತಗೊಳಿಸುವ ಬಗ್ಗೆ ಸಮಾವೇಶವು ವಿಸ್ತೃತ ಮಾತುಕತೆಗಳನ್ನು ನಡೆಸಲಿದೆ.

ಕಳೆದ ಜೂನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಆಗಮಿಸಿದ ಸಂದರ್ಭದಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ಇವಾಂಕಾ ಅವರನ್ನು ಆಹ್ವಾನಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News