×
Ad

ನ 19: ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಕನ್ವೆನ್ಶನ್

Update: 2017-11-18 23:33 IST

ಉಳ್ಳಾಲ, ನ. 18: ಎಸ್ಸೆಸ್ಸೆಫ್ ದಕ.ಜಿಲ್ಲಾ ಸಮಿತಿ ವತಿಯಿಂದ ನ.25 ರಂದು ಮಧ್ಯಾಹ್ನ 2 ಗಂಟೆಗೆ ಮಂಗಳೂರಿನಲ್ಲಿ ನಡೆಯುವ ಹುಬ್ಬುರಸೂಲ್ ಕಾನ್ಫರೆನ್ಸ್ ನ ಪ್ರಚಾರಾರ್ಥ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಕನ್ವೆನ್ಶನ್ ನ.19 ರಂದು ಸಂಜೆ 4ಕ್ಕೆ ಅಲ್ ಮದೀನಾ ಹಾಲ್ ತಿಬ್ಲೆಪದವುವಿನಲ್ಲಿ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಎಸ್ಸೆಸ್ಸೆಫ್ ದ.ಕ. ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾ  ಕಾರ್ಯಕ್ರಮವನ್ನು ಉಧ್ಘಾಟಿಸಲಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ, ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು, ಜಿಲ್ಲಾ ಕಾರ್ಯದರ್ಶಿ ಸಲೀಂ ಹಾಜಿ ಬೈರಿಕಟ್ಟೆ, ಶರೀಪ್ ನಂದಾವರ, ಸಯ್ಯದ್ ಖುಬೈಬ್ ತಂಙಳ್, ಜಮಾಲುದ್ದೀನ್ ಸಖಾಫಿ ಮುದುಂಗಾರುಕಟ್ಟೆ ಹಾಗು ಇತರರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಪ್ರಧಾನ ಕಾರ್ಯದರ್ಶಿ ಶರೀಫ್ ಮುಡಿಪು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News