ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಕನ್ವೆನ್ಶನ್

Update: 2017-11-19 07:37 GMT

ಬೆಳ್ತಂಗಡಿ, ನ.19: ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ನ.25ರಂದು ಅಪರಾಹ್ನ 2 ಗಂಟೆಗೆ ಮಂಗಳೂರಿನ ಜ್ಯೋತಿ ಸರ್ಕಲ್ ನಿಂದ ನಡೆಯುವ "ಇಲಲ್ ಹಬೀಬ್ ಮೀಲಾದ್ ರ್ಯಾಲಿ ಹಾಗೂ  ನೆಹರೂ ಮೈದಾನದಲ್ಲಿ ನಡೆಯುವ ಹುಬ್ಬುರ್ರಸೂಲ್ ಕಾನ್ಫರೆನ್ಸ್ " ನ ಪ್ರಚಾರಾರ್ಥ ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಕನ್ವೆನ್ಶನ್ ಕಾರ್ಯಕ್ರಮ ಇಲ್ಲಿನ ಸುವರ್ಣ ಆರ್ಕೆಡ್ ನಲ್ಲಿ ನಡೆಯಿತು.

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಖಾಸಿಂ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಡಿವಿಷನ್ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಹಿಮಾನ್ ಸಖಾಫಿ ಉಧ್ಘಾಟಿಸಿದರು. ಎಸ್ಸೆಸ್ಸೆಫ್ ದ.ಕ. ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಮದ್ಹುರಸೂಲ್ ಕುರಿತು ವಿಷಯ ಮಂಡನೆ ಮಾಡಿದರು.

ವೇದಿಕೆಯಲ್ಲಿ ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಕೋಶಾಧಿಕಾರಿ ಅಬ್ದುಲ್ ರಝಾಕ್ ಸಖಾಫಿ ಮಡಂತ್ಯಾರ್, ಎಸ್.ಎಂ.ಎ. ರಾಜ್ಯ ಕಾರ್ಯದರ್ಶಿ ಸಾದಿಕ್ ಮಾಸ್ಟರ್ ಮಲೆಬೆಟ್ಟು, ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ, ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು, ಜಿಲ್ಲಾ ನಾಯಕರಾದ ಮುತ್ತಲಿಬ್ ವೇಣೂರು, ಶರೀಫ್ ನಂದಾವರ, ಎಸ್ಸೆಸ್ಸೆಫ್ ರಾಜ್ಯ ನಾಯಕ ಶಂಸುದ್ದೀನ್ ಶಿವಮೊಗ್ಗ ಮೊದಲಾದವರು ಉಪಸ್ಥಿತರಿದ್ದರು.
ಎಸ್ಸೆಸ್ಸೆಫ್ ಡಿವಿಷನ್ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಮಾಚಾರ್ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News