ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ಜುಲ್ಲಾ ಆಸ್ಪತ್ರೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Update: 2017-11-19 11:45 GMT

ಉಡುಪಿ, ನ.19: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರು ಬಿಆರ್‌ಎಸ್ ಸ್ವಾಸ್ಥ ಮತ್ತು ಸಂಶೋಧನಾ ಸಂಸ್ಥೆಯ ಸಹಭಾಗಿತ್ವದಲ್ಲಿ ನಗರದ ಕೆಎಂ ಮಾರ್ಗದಲ್ಲಿ ನಿರ್ಮಾಣಗೊಂಡ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವಿವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್. ರಮೇಶ್ ಕುಮಾರ್, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಬಿಆರ್‌ಎಸ್ ಸ್ವಾಸ್ಥ ಮತ್ತು ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಡಾ.ಬಿ.ಆರ್.ಶೆಟ್ಟಿ, ಉಪಾಧ್ಯಕ್ಷ ಡಾ. ಸಿಆರ್ ಶೆಟ್ಟಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಉಡುಪಿಯ ಬೋರ್ಡ್ ಹೈಸ್ಕೂಲ್‌ನಲ್ಲಿ ನಡೆದ ಆಸ್ಪತ್ರೆಯ ಉದ್ಘಾ ಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು. ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News