ಇಂದಿರಾ ಕ್ಯಾಂಟೀನ್‌ನಲ್ಲೂ ಜಯಂತಿಯ ಸಂಭ್ರಮ

Update: 2017-11-19 13:15 GMT

ಬೆಂಗಳೂರು, ನ.19: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ನೂರನೇ ಜನ್ಮ ದಿನಾಚರಣೆಯನ್ನು ಇಂದಿರಾ ಕ್ಯಾಂಟೀನ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು.

ರವಿವಾರ ಇಲ್ಲಿನ ರಾಜಾಜಿನಗರದ ಮೋದಿ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ ಆವರಣದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಇಂದಿರಾ ಜನ್ಮ ದಿನಾಚರಣೆ ಆಚರಿಸಿ ಸಾರ್ವಜನಿರಿಗೆ ಸಿಹಿ-ತಿಂಡಿಗಳನ್ನು ಹಂಚಿ ಸಂಭ್ರಮಿಸಿದರು.

ಇಂದಿರಾ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿಬಿಎಂಪಿ ಮೇಯರ್ ಸಂಪತ್ ರಾಜ್, ಇಂದಿರಾ ಗಾಂಧಿ ಅವರ ಕೊಡುಗೆ ಅಪಾರ. ಹಸಿವು ಮುಕ್ತ ಕನಸು ಕಂಡಿದ್ದ ಅವರ ಆಶಯ ಈಡೇರಿಸಲು ಇಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಇಂದಿರಾ ಕ್ಯಾಂಟೀನ್ ಆರಂಭಿಸಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ, ಕ.ವಿ.ಕಾ.ಅಧ್ಯಕ್ಷ ಎಸ್.ಮನೋಹರ್, ಕಾಂಗ್ರೆಸ್ ಮುಖಂಡ ವಿಜಯ ಮುಳುಗುಂದ್, ಸಲೀಮ್, ಜನಾರ್ದನ್, ಶೇಖರ್ ಸೇರಿ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News