×
Ad

ನ.22: ಮೂಡುಬಿದಿರೆಯಲ್ಲಿ ದ.ಕ.ಜಿಲ್ಲಾ ಮಟ್ಟದ ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶ

Update: 2017-11-19 20:52 IST

ಪುತ್ತೂರು, ನ, 19: ನವೆಂಬರ್ 22 ರಂದು 25 ನೇ ದ.ಕ.ಜಿಲ್ಲಾ ಮಟ್ಟದ ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶ ಮೂಡುಬಿದಿರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡಬಿದಿರೆ ಮತ್ತು ರೋಟರಿ ಕ್ಲಬ್ ಮೂಡಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ ಸಮಾವೇಶ ನಡೆಯಲಿದೆ.

 ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮೂಡಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಕಾಮತ್ ವಹಿಸಲಿದ್ದು, ಮೂಡಬಿದಿರೆ ರೋಟರಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಅಮರನಾಥ ಶೆಟ್ಟಿ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ವೈ ಶಿವರಾಮಯ್ಯ, ಪ್ರೊಫೆಸರ್ ಜಿ ಎನ್ ಭಟ್, ರೋಟರಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ನಾರಾಯಣ ಪಿ.ಎಂ , ಸಂಚಾಲಕ ಯತಿಕುಮಾರ್ ಸ್ವಾಮಿ ಗೌಡ ಭಾಗವಹಿಸಲಿರುವರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ಹಾಜಿ ಯಸ್ ಅಬೂಬಕ್ಕರ್ ಆರ್ಲಪದವು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ , ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಜ್ಞಾನ ಪರಿವೀಕ್ಷಕ ಪುರುಷೋತ್ತಮ ಟಿ , ಮೂಡಬಿದಿರೆ ರೋಟರಿ ಕ್ಲಬ್ ಕಾರ್ಯದರ್ಶಿ ಮುಹಮ್ಮದ್ ಆರೀಫ್, ಮೂಡಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಬಿ.ಕುಟಿನ್ಹಾ ಭಾಗವಹಿಸಲಿದ್ದಾರೆ.

ಸುಸ್ಥಿರ ಅಭಿವೃದ್ಧಿಗೆ ವಿಜ್ಞಾನ ತಂತ್ರಜ್ಞಾನ ಮತ್ತು ನವೀನ ಅನ್ವಯಗಳ ಬಳಕೆ ಎಂಬುದು ಸಮಾವೇಶದ ಕೇಂದ್ರ ವಿಷಯವಾಗಿದೆ. ಸಮಾವೇಶದಲ್ಲಿ ಭಾಗವಹಿಸುವ ತಂಡಗಳು ಸದ್ರಿ ದಿವಸ ಬೆಳಿಗ್ಗೆ 9.30 ರ ಮೊದಲು ನಿಗದಿಪಡಿಸಿದ ಕೊಠಡಿಯಲ್ಲಿ ತಮ್ಮ ಪರಿಕರಗಳೊಂದಿಗೆ ಹಾಜರಿರುವುದು. ಹಿರಿಯ, ಕಿರಿಯ, ಗ್ರಾಮೀಣ/ ನಗರದ 10 ತಂಡಗಳನ್ನು ಆಯ್ಕೆ ಮಾಡಿ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಕಳುಹಿಸಿಕೊಡಲಾಗುವುದು ಸಂಘಟಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News