×
Ad

ತುರುವೇಕೆರೆಯಲ್ಲಿ ಜೆಡಿಎಸ್ ನಾಯಕರಿಬ್ಬರ ಕಿತ್ತಾಟ

Update: 2017-11-19 21:03 IST

ತುಮಕೂರು,ನ.19: ತುರುವೇಕೆರೆ ತಾಲೂಕಿನ ಮಾಜಿ ತಾಪಂ ಅಧ್ಯಕ್ಷ ರಮೇಶ್‌ಗೌಡ ಮತ್ತು ಹಾಲಿ ಶಾಸಕ ಎಂ.ಟಿ.ಕೃಷ್ಣಪ್ಪ ನಡುವಿನ ವೈಮನಸ್ಸು ತಾರಕಕ್ಕೇರಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಅರೆಸೇನಾ ಪಡೆಯನ್ನು ನಿಯೋಜಿಸಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

ರಮೇಶ್‌ಗೌಡ 2018ರ ಚುನಾವಣೆಯಲ್ಲಿ ತುರುವೇಕೆರೆ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅವರನ್ನು ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಆದರೆ ಪಕ್ಷದಿಂದ ಉಚ್ಚಾಟನೆಗೊಂಡಿದ್ದರೂ ಸ್ವಾಭಿಮಾನಿ ಸಮಾವೇಶ ನಡೆಸಲು ಅವರು ಮುಂದಾಗಿದ್ದಾರೆ. ಆದರೆ ಇನ್ನೊಂದೆಡೆ ಸಮಾವೇಶದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಫ್ಲೆಕ್ಸ್, ಬ್ಯಾನರ್ ಇನ್ನಿತರ ಪ್ರಚಾರದ ವಸ್ತುಗಳನ್ನು ಕಿತ್ತು ಹಾಕಲಾಗಿದೆ. 

ಇಬ್ಬರ ನಡುವಿನ ಕಿತ್ತಾಟ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ರಿಗೆ ತಲೆನೋವಾಗಿ ಪರಿಣಮಿಸಿದೆ. ಈಗಾಗಲೇ ಶಾಸಕ ಎಂ.ಟಿ.ಕೃಷ್ಣಪ್ಪ ವಿರುದ್ಧ ಕೊಲೆ ಬೆದರಿಕೆ ಕೇಸು ದಾಖಲಾಗಿದ್ದು, ಸಮಾವೇಶವನ್ನು ತಡೆಯಲು ಯತ್ನಿಸಿದರೆ ಉಂಟಾಗಬಹುದಾದ ಗಲಭೆ ನಿಯಂತ್ರಿಸುವ ಸಲುವಾಗಿ ಹೆಚ್ಚಿನ ಬಂದೋಬಸ್ತ್ ಹಾಗೂ ಅರೆಸೇನಾ ಪಡೆಯನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾ ಗೋಪಿನಾಥ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News