ಅನಂತ್ ಕುಮಾರ್ ಹೆಗಡೆ ಅಸಾಂವಿಧಾನಿಕ ಪದ ಬಳಕೆ ಮಾಡಿಲ್ಲ: ಕೇಂದ್ರ ಸಚಿವ ಡಿವಿ
Update: 2017-11-19 21:14 IST
ಬೆಂಗಳೂರು, ನ.19: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಯಾವುದೇ ಅಸಂವಿಧಾನಿಕ ಪದ ಬಳಕೆ ಮಾಡಿಲ್ಲವೆಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಮರ್ಥಿಸಿಕೊಂಡಿದ್ದಾರೆ.
ನಗರದ ಜಿಕೆವಿಕೆಯಲ್ಲಿ ಆಯೋಜಿಸಿದ್ದ ಕೃಷಿ ಮೇಳದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆಯಲ್ಲಿ ಓಟು ಪಡೆಯಲು ಏನು ಬೇಕಾದರು ಮಾಡಲಿದ್ದಾರೆ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ ಅಷ್ಟೇ. ಇದರಲ್ಲಿ ಯಾವುದೇ ತಪ್ಪಿಲ್ಲವೆಂದು ತಿಳಿಸಿದರು.
ಮಹಾದಾಯಿ ವಿಚಾರವಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿಗೆ ಯಾವುದೇ ಪತ್ರ ಬರೆದಿಲ್ಲ. ವರದಿಗಾರರಿಗೆ ಸುಳ್ಳು ಸುದ್ದಿಗಳನ್ನು ಕೊಡುತ್ತಿದ್ದಾರೆ. ಈ ಬಗ್ಗೆ ಜನತೆ ಎಚ್ಚರಿಕೆಯಿಂದಿರಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಂದಿನ ಡಿಸೆಂಬರ್‌ನಲ್ಲಿ ಮಹಾದಾಯಿ ವಿಚಾರವಾಗಿ ಗೋವಾ ಸಿಎಂ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.