×
Ad

ನ.20: ಮಂಜನಾಡಿಯಲ್ಲಿ ಇಲಲ್ ಹಬೀಬ್ ಹುಬ್ಬುರ್ರಸೂಲ್ ಕಾನ್ಫರೆನ್ಸ್

Update: 2017-11-19 22:00 IST

ಉಳ್ಳಾಲ, ನ.19 ಎಸ್‌ವೈಎಸ್, ಎಸ್ಸೆಸ್ಸೆಫ್ ಮಂಜನಾಡಿ ಶಾಖೆ ವತಿಯಿಂದ ಇಲಲ್ ಹಬೀಬ್ ಹುಬ್ಬುರ್ರಸೂಲ್ ಕಾನ್ಫರೆನ್ಸ್ ನ.20ರಂದು ಸಂಜೆ 6 ಗಂಟೆಗೆ ಮಂಜನಾಡಿ ಜಂಕ್ಷನ್‌ನಲ್ಲಿ ನಡೆಯಲಿದೆ.

ಮಂಜನಾಡಿ ಅಬ್ಬಾಸ್ ಉಸ್ತಾದ್ ದುಆ ಆಶೀರ್ವಚನ ನೀಡಲಿದ್ದಾರೆ. ಪಿ.ಎ. ಅಹ್ಮದ್ ಬಾಖವಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರೀಂ ಫೈಝಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಅಬ್ದುಲ್ ಲತೀಫ್ ಸಅದಿ ಪಯಶ್ವಿ ಮುಖ್ಯ ಪ್ರಭಾಷಣಗೈಯುವರು.

ಕಾರ್ಯಕ್ರಮದಲ್ಲಿ ಮಂಜನಾಡಿ ಜಮಾಅತ್ ಅಧ್ಯಕ್ಷ ಮೈಸೂರು ಬಾವ, ಸಚಿವ ಯು.ಟಿ ಖಾದರ್, ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹಾಜಿ ಎನ್. ಎಸ್. ಕರೀಂ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಜನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News