ಪದ್ಮಾವತಿ ಚಿತ್ರದ ದೃಶ್ಯಗಳಿಗೆ ಕತ್ತರಿ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Update: 2017-11-20 13:15 GMT

ಹೊಸದಿಲ್ಲಿ, ನ.20: ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ‘ಪದ್ಮಾವತಿ’ ಚಿತ್ರದಲ್ಲಿ ಇದೆ ಎನ್ನಲಾದ ಕೆಲ ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕಬೇಕು ಎನ್ನುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಸಿನೆಮಾ ಇನ್ನೂ ಸಿಬಿಎಫ್ ಸಿಯಿಂದ ಪ್ರಮಾಣಪತ್ರ ಪಡೆದಿಲ್ಲ ಎಂದು ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ಅವರಿದ್ದ ಪೀಠ ಹೇಳಿತು.

ಸಿನೆಮಾಗೆ ಸೆನ್ಸಾರ್ ಬೋರ್ಡ್ ಪ್ರಮಾಣಪತ್ರ ಸಿಗದಿದ್ದರೂ ಹಾಡುಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಅರ್ಜಿ ಸಲ್ಲಿಸಿದ್ದ ಅಡ್ವಕೇಟ್ ಎಂ.ಎಲ್. ಶರ್ಮಾ ಆರೋಪಿಸಿದ್ದರು.

ರಾಣಿ ಪದ್ಮಿನಿ ಪಾತ್ರಕ್ಕೆ ಧಕ್ಕೆ ತರುವಂತಹ ಎಲ್ಲಾ ದೃಶ್ಯಗಳನ್ನು ಚಿತ್ರದಿಂದ ತೆಗೆದು ಹಾಕಬೇಕು ಎಂದು ಶರ್ಮಾ ಅರ್ಜಿಯಲ್ಲಿ ಮನವಿ ಮಾಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News