ದಾವಣಗೆರೆ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ ಮೃತ್ಯು
Update: 2017-11-20 18:52 IST
ದಾವಣಗೆರೆ, ನ.20: ಇತ್ತೀಚೆಗೆ ರೈತರನೋರ್ವರು ಸಾಲಬಾಧೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ.
ಚನ್ನಗಿರಿ ತಾಲೂಕಿನ ಬೆಳ್ಳಿಗನೂರು ಗ್ರಾಮದ ರೈತ ಬಿ.ಎನ್.ಬಸವರಾಜ್ (41) ಮೃತಪಟ್ಟ ರೈತ ಎಂದು ಗುರುತಿಸಲಾಗಿದೆ.
ಕಳೆದ ನಾಲ್ಕು ದಿನಗಳ ಹಿಂದೆ ರೈತ ಬಸವರಾಜ್ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬ್ಯಾಂಕ್ ಮತ್ತು ಖಾಸಗಿ ವ್ಯಕ್ತಿಗಳ ಬಳಿ ರೈತ ಬಸವರಾಜ್ ಸುಮಾರು 8 ಲಕ್ಷ ರೂ. ಸಾಲ ಮಾಡಿದ್ದರು. ಇದನ್ನು ತೀರಿಸಲಾಗದೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ.
ಈ ಬಗ್ಗೆ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.