ಪ್ಲಾಸ್ಟಿಕ್ ಬ್ಯಾಗ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: ಮೂವರು ಮೃತ್ಯು

Update: 2017-11-20 14:08 GMT

ಲುಧಿಯಾನ, ನ.20: ಪ್ಲಾಸ್ಟಿಕ್ ಬ್ಯಾಗ್ ಗಳನ್ನು ತಯಾರಿಸುತ್ತಿದ್ದ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿದ್ದು, 15ಕ್ಕೂ ಅಧಿಕ ಮಂದಿ ನಾಪತ್ತೆಯಾದ ಘಟನೆ ಪಂಜಾಬ್ ನ ಲುಧಿಯಾನದಲ್ಲಿ ನಡೆದಿದೆ.

ಮುಷ್ತಾಕ್ ನಗರದಲ್ಲಿರುವ ಮೂರು ಮಹಡಿಗಳ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.  ಅವಶೇಷಗಳಡಿ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈಗಾಗಲೇ ಒಂದು ಮೃತದೇಹವನ್ನು ಹೊರತೆಗೆಯಲಾಗಿದೆ. ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ ಎಂದು ಲುಧಿಯಾನದ ಹಿರಿಯ ಪೊಲೀಸ್ ಅಧಿಕಾರಿ ಜಿತೇಂದರ್ ಸಿಂಗ್ ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News