×
Ad

ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ: ಪ್ರಧಾನ ಕಾರ್ಯದರ್ಶಿಯಾಗಿ ಉಮರ್ ಫಾರೂಕ್

Update: 2017-11-20 20:12 IST

ಬಂಟ್ವಾಳ, ನ. 20: ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಉಮರ್ ಫಾರೂಕ್ ಅವರನ್ನು ಆಹಾರ ಸಚಿವ ಯು.ಟಿ.ಖಾದರ್ ಮತ್ತು ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ಶಿಫಾರಸಿನ ಮೇರೆಗೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಪಕ್ಷದ ಸಂಘಟನೆಗೆ ಮತ್ತು ಪಕ್ಷದ ಬಲವರ್ದನೆಗಾಗಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರು ನೇಮಕ ಮಾಡಿದ್ದಾರೆ.

ಅವರು ಪುದು ವಲಯ ಯುವ ಕಾಂಗ್ರೆಸ್‌ನ ಅಧ್ಯಕ್ಷ ಹಾಗೂ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಪುದು ಗ್ರಾ.ಪಂ.ಸದಸ್ಯರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿಸದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News