ಹೊಸದಿಲ್ಲಿಯಲ್ಲಿ ರೈತರಿಂದ ಪ್ರತಿಭಟನೆ
Update: 2017-11-20 21:19 IST
ಹೊಸದಿಲ್ಲಿ, ನ. 20: ಬೆಳೆ ಸಾಲ ಮನ್ನಾ ಮಾಡುವಂತೆ ಹಾಗೂ ತಮ್ಮ ಉತ್ಪನ್ನಗಳಿಗೆ ನ್ಯಾಯೋಚಿತ ಬೆಲೆ ನೀಡುವಂತೆ ಆಗ್ರಹಿಸಿ ಸಾವಿರಾರು ರೈತರು ಸೋಮವಾರ ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು.
ತಮಿಳುನಾಡು, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರಪ್ರದೇಶ, ಪಂಜಾಬ್ ಹಾಗೂ ತೆಲಂಗಾಣ ದಂತಹ ರಾಜ್ಯಗಳ 184 ರೈತ ಸಂಘಟನೆಗಳು ಅಖಿಲ ಭಾರತ ಕಿಸಾನ್ ಸಂಘರ್ಷ ಸಹಕಾರ ಸಮಿತಿ ಅಡಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.