ಜಮ್ಮುಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಉಗ್ರ ಹತ್ಯೆ

Update: 2017-11-20 15:50 GMT

 ಶ್ರೀನಗರ, ನ. 20: ಜಮ್ಮುಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್‌ನ ಅರಣ್ಯ ಪ್ರದೇಶದಲ್ಲಿ ಸೋಮವಾರ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅಡಗಿರುವ ಬಗ್ಗೆ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಟ್ರಾಲ್‌ನ ಗುಜರ್‌ಬಸ್ತಿ ಅರಣ್ಯ ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿತು. ಈ ಸಂದರ್ಭ ಉಗ್ರರು ಗುಂಡು ಹಾರಿಸಿದರು. ಯೋಧರು ಪ್ರತಿ ದಾಳಿ ನಡೆಸಿದರು. ಈ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತನಾದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News