ಯುವತಿಯ ಮಾನಭಂಗಕ್ಕೆ ಯತ್ನ: ಆರೋಪಿಯ ಬಂಧನ

Update: 2017-11-20 16:45 GMT

ಮಂಗಳೂರು, ನ. 20: ಯುವತಿಯೋರ್ವಳ ಮಾನಂಭಂಗಕ್ಕೆ ಯತ್ನಿಸಿದ ಘಟನೆಗೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ದಿಲ್ಲಿಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿರುವ ಮುಹಮ್ಮದ್ ಇಫ್ತಿಕಾರ್ (40) ಎಂದು ಗುರುತಿಸಲಾಗಿದೆ.

ಈತನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ನಗರದ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿರುವ 27 ವರ್ಷದ ಯುವತಿ ಕೆಲಸ ಮುಗಿಸಿ ರಾತ್ರಿ 9:30 ಸುಮಾರಿಗೆ ಬಸ್ಸಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಆರೋಪಿ ಇಫ್ತಿಕಾರ್ ಕೂಡ ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದು, ಯುವತಿ ಬಿಕರ್ನಕಟ್ಟೆ ಕೈಕಂಬದಲ್ಲಿ ಇಳಿದು ಮನೆಗೆ ಹೋಗುತ್ತಿದ್ದಾಗ ಆಕೆಯನ್ನು ಹಿಂಬಾಲಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಯುವಕ ತನ್ನನ್ನು ಹಿಂಬಾಲಿಸುತ್ತಿರುವುದನ್ನು ಗಮನಿಸಿದ ಯುವತಿ ಬೊಬ್ಬೆ ಹಾಕಿದಾಗ ಸಾರ್ವಜನಿಕರು ಜಮಾಯಿಸಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಮಾನ ಭಂಗ ಯತ್ನ ಕೇಸು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News