ರಾಹುಲ್ ಪಟ್ಟಾಭಿಷೇಕಕ್ಕೆ ಸಿದ್ಧತೆ...

Update: 2017-11-20 17:52 GMT

ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕೆ ರಾಹುಲ್ ಗಾಂಧಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದ್ದು, ಡಿ.19ಕ್ಕೆ ಅವರ ಪಟ್ಟಾಭಿಷೇಕಕ್ಕೆ ಮುಹೂರ್ತ ನಿಗದಿಯಾಗಿದೆ. ಗುಜರಾತ್, ಹಿಮಾಚಲಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶ ಡಿ.18ಕ್ಕೆ ಪ್ರಕಟಗೊಳ್ಳಲಿದ್ದು, ಮರುದಿನವೇ ರಾಹುಲ್ ಕಾಂಗ್ರೆಸ್ ಅಧ್ಯಕ್ಷಗಾದಿಯನ್ನು ಏರುವ ಸಾಧ್ಯತೆ ಇದೆ. ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ತನ್ನ 19 ವರ್ಷಗಳ ಸುದೀರ್ಘ ಅವಧಿಯ ಬಳಿಕ ಅಧ್ಯಕ್ಷ ಸ್ಥಾನವನ್ನು ತನ್ನ 47ರ ಹರೆಯದ ಪುತ್ರನಿಗೆ ಹಸ್ತಾಂತರಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor